ಅಳದಂಗಡಿ:ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಮಂಗಳೂರು ಧರ್ಮಪಾಂತ್ಯದ ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಅವರು ಭೇಟಿ ನೀಡಿದರು. ಶಾಲಾ ಸಂಚಾಲಕ ಫಾ.ಎಲಿಯಸ್ ಡಿಸೋಜ ಅವರು ಬಿಷಪ್ ರ ಕಿರು ಪರಿಚಯ ನೀಡಿದರು. ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜ ಅವರು ಶಾಲಾ ವರದಿ ವಾಚಿಸಿದರು. ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನಾ ಅವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಉದ್ದೇಶಿಸಿ, ವಿದ್ಯಾರ್ಥಿಗಳು ಶಿಕ್ಷಕರನ್ನು ತಮ್ಮ ತಂದೆ ತಾಯಿಗೆ ಸಮಾನವಾಗಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಬೇಕು ಹಾಗೂ ಧಾರ್ಮಿಕ ಸೌಹಾರ್ದದಿಂದ ಇರಬೇಕು ಎಂದು ನುಡಿ ಸಂದೇಶ ನೀಡಿದರು.
ಫಾ. ಐವನ್ಅ ಶ್ವಿನ್ ಡಿಸೋಜ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಲಿಯೋ ಪಿರೇರ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಸ್ಟೀವನ್ ಪಾಯಸ್ ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹೊಸದಾಗಿ ಚುನಾಯಿತರಾದ ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಸ್ಟೀವನ್ ಪಾಯ್ಸ್ ಅವರಿಗೆ ಹಾಗೂ ಮಾಜಿ ಉಪಾಧ್ಯಕ್ಷ ಶ್ಯಾಮ್ ಸುಂದರ ಭಟ್ ಅವರಿಗೆ ಬಿಷಪ್ ಅವರು ಹೂಗುಚ್ಚ ನೀಡಿ ಗೌರವಿಸಿದರು. ಶಿಕ್ಷಕಿ ಜೇಸಿನಾ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ಸಿಸ್ಟರ್ ಅನ್ನಪೂರ್ಣ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ವಿಶಾಲಾಕ್ಷಿ ಧನ್ಯವಾದವಿತ್ತರು.