ಕೊಕ್ಕಡ: ಧರ್ಮಸ್ಥಳದಿಂದ ಮೈಸೂರು ಕಡೆಗೆ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಗೆ ವಿದ್ಯುತ್ ತಂತಿ ಸಿಲುಕಿದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕು ಕೊಕ್ಕಡ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಮೂಡುಬೈಲು ಬಳಿ ನಡೆದಿದೆ.
ವಿದ್ಯುತ್ ತಂತಿಯ ಮೇಲೆ ಮರ ಬಿದ್ದ ಪರಿಣಾಮ ತಂತಿ ರಸ್ತೆಗೆ ಬಾಗಿತ್ತು. ಆದರೆ ಈ ಬಗ್ಗೆ ಬಸ್ ಚಾಲಕನಿಗೆ ಅರಿವಿಲ್ಲದೆ ಬಸ್ ಚಲಿಸಿದ ಪರಿಣಾಮ ತಂತಿಯು ಬಸ್ಗೆ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ವಿದ್ಯುತ್ ಸರಬರಾಜು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.

ಘಟನೆಯಲ್ಲಿ ಬಸ್ನ ಮುಂಬಾಗ ಸ್ವಲ್ಪ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಸ್ಥಳೀಯರಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ನಂತರ ಸ್ಥಳೀಯರು ಹಾಗೂ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.