ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು. 19ರಂದು ರಸ್ತೆ ಸಂಚಾರ ನಿಯಮ ಹಾಗೂ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಫಾ. ವಿಜಯ್ ಲೋಬೋ ವಹಿಸಿದ್ದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ತಿಳಿ ಹೇಳಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಎಚ್. ಕೆ. ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಿ ಯಾವ ರೀತಿ ಮುಂಜಾಗ್ರತಾ ಕ್ರಮವನ್ನು ವಹಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಸಹ ಶಿಕ್ಷಕ ರವಿಕುಮಾರ್, ಫಿಲೋಮಿನಾ ಹಾಗೂ ಇತರರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ನಿಶಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಅರ್ಪಿಸಿದರು.