


ಬೆಳಾಲು: ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜು.29ರಂದು ನೆರವೇರಿತು.


ಆಡಳಿತ ಮೊಕ್ತೇಸರ ಜೀವಂದರ ಕುಮಾರ್ ಜೈನ್, ಅಸ್ರಣ್ಣ ಗಿರೀಶ್ ಬಾರಿತ್ತಾಯ,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿಯ ಸದಸ್ಯರು, ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.


            






