
ಬೆಳಾಲು: ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಶ್ರೀ ಧ. ಮ. ಪ್ರೌಢ ಶಾಲೆ, ಬೆಳಾಲು, ಹಳೆ ವಿಧ್ಯಾರ್ಥಿ ಸಂಘ, ಶಿಕ್ಷಕ-ರಕ್ಷಕ ಸಂಘ, ಎಸ್.ಡಿ.ಎಮ್. ಹೈಸ್ಕೂಲ್, ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕ, ಉಜರೆ-ಬೆಳಾಲು ಎ ಮತ್ತು ಬಿ, ರೋಟರಿ ಕ್ಲಬ್ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜು. 31ರಂದು ಬೆಳಾಲು ಶ್ರೀ ಧ. ಮ. ಪ್ರೌಢ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು.
ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ, ಕ್ಯಾನ್ಸರ್ ತಪಾಸಣೆ ಮತ್ತು ಅರಿವು ಕಾರ್ಯಕ್ರಮ ಇತ್ಯಾದಿ ಚಿಕಿತ್ಸೆಗಳು ನಡೆಯಿತು.
ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯ್ಸ್ ಅಧ್ಯಕ್ಷತೆ ವಹಿಸಿದ್ದರು. ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿ ಗಳಾಗಿ ಸುಳ್ಯ ಕೆ.ವಿ.ಜಿ. ಡೆಂಟಲ್ ಕಾಲೇಜು ಎಂ. ಎಂ. ವಿಭಾಗದ ಮುಖ್ಯಸ್ಥ ಡಾ. ದಯಾಕರ್, ಸುಳ್ಯ ಕೆ. ವಿ. ಜಿ. ಡೆಂಟಲ್ ಕಾಲೇಜು ಅಸಿಸ್ಟೆಂಟ್ ಪ್ರೊಪಸರರ್ ಡಾ. ಅನಿತಾ ದಯಾಕರ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಯೋಜನಾಧಿಕಾರಿ ಜವಂತ್ ಪಟ ಗಾರ, ಜನಜಾಗೃತಿ ವೇದಿಕೆಯ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ಬೆಳಾಲು ಮೈತಿ ಯುವಕ ಮಂಡಲದ ಅಧ್ಯಕ್ಷ ನಿತಿನ್ ಮೋನಿಸ್, ಬೆಳಾಲು ಶ್ರೀ ಧ. ಮ. ಪ್ರೌಢ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಿಧರ ಓ., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್, ಕುರ್ಕಿಲು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಯೋಜನೆಯ ಉಜಿರೆ ವಲಯದ ಮೇಲ್ವಿಚಾರಕಿ ಪೂರ್ಣಿಮಾ, ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಸುಳ್ಯ ಕೆ. ವಿ. ಡೆಂಟಲ್ ಕಾಲೇಜು ತಂಡ, ವಿದ್ಯಾರ್ಥಿಗಳು, ಊರವರು ಉಪಸ್ಥಿತರಿದ್ದರು. ಬಳಿಕ ದಂತ ಚಿಕಿತ್ಸಾ ಶಿಬಿರದ ಪ್ರಯೋಜನ ಪಡೆದುಕೊಂಡರು.
ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಸ್ವಾಗತಿಸಿ, ಉಜಿರೆ – ಬೆಳಾಲು ಶೌರ್ಯ ತುರ್ತು ಸ್ಪಂದನಾ ಘಟಕದ ಸಂಯೋಜಕ ಸುಲೈಮಾನ್ ಬೆಳಾಲು
ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಶಿಕ್ಷಕ ಸುಮನ್ ಯು.ಎಸ್. ವಂದಿಸಿದರು.