
ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಮತ್ತು ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕು ಮಟ್ಟದ 14/17 ವಯೋಮಿತಿಯ ಶಾಲಾ ಬಾಲಕ/ಬಾಲಕಿಯರ ಚೆಸ್ ಪಂದ್ಯಾವಳಿ ಸರ್ಕಾರಿ ಪ್ರೌಢಶಾಲೆ, ಗುರುವಾಯನಕೆರೆ ನಡೆಯಿತು. ಈ ತಾಲೂಕು ಮಟ್ಟದ ಚೆಸ್ ಪಂದ್ಯಾವಳಿ ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಅಲ್ಫಾಝ್ 17 ವಯೋಮಿತಿಯ ಶಾಲಾ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಬೃಂದಾ ಎಸ್. ದ್ವಿತೀಯ ಸ್ಥಾನ ಮತ್ತು 14 ವಯೋಮಿತಿಯ ಬಾಲಕರ ವಿಭಾಗದಲ್ಲಿ ಚಿಂತನ್ ಐದನೇ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.