
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅನಾಮಿಕ ವ್ಯಕ್ತಿಯನ್ನು ಧರ್ಮಸ್ಥಳ ಸಮಾಧಿ ಸ್ಥಳಕ್ಕೆ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆದುಕೊಂಡು ಹೋಗಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯ ನಡೆಯಿತು. 9ನೇ ಗುರುತಿನ ಉತ್ಖನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಮಳೆಯ ಕಾರಣ10ನೇ ಕಾರ್ಯಾಚರಣೆ ಸ್ಥಗಿತ- ಸೋಮವಾರಕ್ಕೆ ಮುಂದೂಡಲಾಗಿದೆ. 6ನೇ ದಿನದ ಉತ್ಖನನ ಕಾರ್ಯಾಚರಣೆ ಅಂತ್ಯವಾಗಿದೆ.