




ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 10ನೇ ಗುರುತಿನ ಉತ್ಖನನದಲ್ಲಿ ಏನೂ ಸಿಕ್ಕಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ. 6ಅಡಿ ಆಳ ತೋಡಿದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಅನ್ನುವ ಮಾಹಿತಿ ಲಭ್ಯವಾಗಿದೆ.
ಆರಂಭದಲ್ಲಿ ಮಳೆಯ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗಿದ್ದರೂ ಕಾರ್ಮಿಕರು ನಿರಂತರವಾಗಿ ಶ್ರಮಿಸಿದ್ದರಿಂದ ಉತ್ಖನನ ಪೂರ್ಣಗೊಂಡಿದೆ. ಈ ಮೂಲಕ ಸೋಮವಾರ 11ನೇ ಗುರುತಿನಲ್ಲಿ ಶೋಧ ಕಾರ್ಯ ನಡೆಯಲಿದೆ.


            






