
ಮಡಂತ್ಯಾರು: ಸರಕಾರಿ ಪ್ರೌಢ ಶಾಲೆ ಗುರುವಾಯನಕೆರೆಯಲ್ಲಿ ಆ.1ರಂದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಫ್ಲವಿಟ ಲಿವಿಯಾ ಡಿಸೋಜಾ, ಶೆಲ್ಡನ್ ಅಂದ್ರಾದೆ, ಆದ್ಯ ಜೆ. ಅವರು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥ ಅವರು ಸಹಕಾರ ನೀಡಿರುತ್ತಾರೆ.