
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.4ರಂದು 11ನೇ ಗುರುತಿನ ಪಕ್ಕದಲ್ಲಿ ಹೊಸ ಜಾಗವನ್ನು ಗುರುತಿಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆಯನ್ನು ಊಟದ ವಿರಾಮ ನೀಡದೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ.