ಧರ್ಮಸ್ಥಳ: ಪೂರ್ವಾನುಮತಿ ಇಲ್ಲದೆ ಅಕ್ರಮ ಕೂಟ ಸೇರಿಕೆ: ಪ್ರಕರಣ ದಾಖಲು

0

ಧರ್ಮಸ್ಥಳ: ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಳ ಕ್ರಾಸ್ ಎಂಬಲ್ಲಿ, ಸುಮಾರು 25 ರಿಂದ 50 ಜನರು, ಎರಡು ಪ್ರತ್ಯೇಕ ಗುಂಪುಗಳಾಗಿ ಅಪರಾಧಿಕ ಕೃತ್ಯ ನಡೆಸಲು ಅಕ್ರಮ ಕೂಟ ಸೇರಿದ್ದು, ಈ ವೇಳೆ ಸ್ಥಳಕ್ಕೆ ಬಂದ ಧರ್ಮಸ್ಥಳ ಪೊಲೀಸ್‌ ಠಾಣಾ ಉಪನಿರೀಕ್ಷಕ ಹಾಗೂ ಇತರ ಪೊಲೀಸ್ ಅಧಿಕಾರಿಗಳು, ಯಾವುದೇ ಅಹಿತಕರ ಘಟನೆಗೆ ನಡೆಸದೇ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಸೇರಿದ್ದ ಗುಂಪುಗಳು ಪರಸ್ಪರ ಗಲಾಟೆ ನಡೆಸಿರುವ ಕುರಿತು ಸುಮೋಟೊ ಪ್ರಕರಣ ದಾಖಲಾಗಿದೆ.

ಸುಮಾರು 50-100 ಮಂದಿ, ಧರ್ಮಸ್ಥಳ ಠಾಣಾ ಆವರಣದ ಮುಂದೆ ಯಾವುದೇ ಪೂರ್ವಾನುಮತಿಯಿಲ್ಲದೇ, ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿರುತ್ತಾರೆ. ಅವರುಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here