ರೋಟಲಯ ಸಂಗೀತ ಸ್ಪರ್ಧೆ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಗೆ ಬಹುಮಾನ

0

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಮಾನಿಕ ಬ್ರಾಹ್ಮಣ ಸಭಾ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆ.10ರಂದು “ರೋಟಾಲಯ” ಸಂಗೀತ ಸ್ಪರ್ಧೆಯನ್ನು ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಆಯೋಜಿಸಲಾಗಿರುತ್ತದೆ.

ಈ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಾಥಮಿಕ ವಿಭಾಗದ ವೈಯಕ್ತಿಕ ವಿಭಾಗ ಸ್ಪರ್ಧೆಯಲ್ಲಿ 6ನೇ ತರಗತಿಯ ಅಂಜಲಿ ದ್ವಿತೀಯ ಸ್ಥಾನ ,ಹಾಗೂ ದೇಶಭಕ್ತಿ ಸಮೂಹ ಗಾನ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದು ವಿಜೇತರಾಗಿದ್ದಾರೆ.

LEAVE A REPLY

Please enter your comment!
Please enter your name here