ಪೆರ್ಲ-ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರೋತ್ಸವ: ಹಿರಿಯ ವಿದ್ಯಾರ್ಥಿಗಳ ಕೊಡುಗೆಯ ಧ್ವಜಸ್ತಂಭ, ಇಂಟರ್ ಲಾಕ್ ಉದ್ಘಾಟನೆ

0

ಬೈಪಾಡಿ: ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕೊಡುಗೆಯಾಗಿ ನೀಡಿದಂತಹ ನೂತನ ಧ್ವಜಸ್ತಂಭ, ಇಂಟರ್ ಲಾಕ್ ವ್ಯವಸ್ಥೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಗೌಡ ಮತ್ತು ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಲಕ್ಷ್ಮಿಕಾಂತ್ ಕೀಲಾರು, ಹರೀಶ್ ಕೋಡಿಮಜಲು, ನವೀನ್ ಪ್ರಕಾಶ್, ತಿರುಮಲೇಶ್ ಭಾಗವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ ಸ್ವಾಗತಿಸಿ ಹಳೆ ವಿದ್ಯಾರ್ಥಿ ಸಂಘಕ್ಕೆ ಶಾಲೆಯ ಪರವಾಗಿ ಕೃತಜ್ಞತೆಗಳನ್ನು ಅರ್ಪಿಸಿದರು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮಹಾಬಲ ಗೌಡ, ಸದಸ್ಯರಾದ ಶ್ರೀನಿವಾಸ ಗೌಡ, ಕವಿತಾ, ಶ್ಯಾಮಲಾ, ಶಶಿಧರ ಗೌಡ ಹಾಗೂ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here