ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಅವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

ಸ್ಕೌಟ್ಸ್ ಗೈಡ್ಸ್, ಕಬ್ ಬುಲ್ ಬುಲ್ ವಿದ್ಯಾರ್ಥಿಗಳು ದೇಶ ಪ್ರೇಮದ ಘೋಷ ವಾಕ್ಯಗಳನ್ನು ಹೇಳುತ್ತಾ ಮೆರವಣಿಗೆ ಮಾಡಿದರು. ದೇಶಪ್ರೇಮವನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ಇದರ ವತಿಯಿಂದ ತುಡಿತ ಭಾಗ ಮೂರೂ ತನು ಸ್ಪಂದಿಸದವರ ಮನ ಸ್ಪಂದಿಸುವ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಅವರ ಮಾರ್ಗದರ್ಶನದೊಂದಿಗೆ ಮೂಡಿ ಬಂದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಶಿಕ್ಷಕೇತರ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here