
ಬೆಳಾಲು: ಕೊಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಹರೀಶ್ ಕೆರೆಕೋಡಿ ಧ್ವಜಾರೋಹಣದ ಮಾಡುವುದರ ಮೂಲಕ ಚಾಲನೆ ನೀಡಿದರು.
ನಂತರ ಮಕ್ಕಳು, ಪೋಷಕರು, ಊರಿನ ವಿದ್ಯಾಭಿಮಾನಿಗಳು ಮೆರವಣಿಗೆ ನಡೆಸಿದರು. ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಸುಮಾರು 21ವರ್ಷಗಳಿಂದ ಅಕ್ಷರದಾಸೋಹ ಕಾರ್ಯಕ್ರಮದಲ್ಲಿ ಅಡುಗೆ ಸಿಬ್ಬಂದಿ ಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕಮಲರನ್ನು ಶಾಲಾ ಪೋಷಕರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಅದೇ ರೀತಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದ ಮಾಧವ ಗೌಡರನ್ನು ಸನ್ಮಾನಿಸಲಾಯಿತು. ಅಲ್ಲದೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಮತ್ತು ಟೈ, ಐಡಿಗಳನ್ನು ಕೊಡುಗೆಯಾಗಿ ನೀಡಿದ ಲೋಕೇಶ್ ಓಣಾಜೆ ಮತ್ತು ದಾಮೋದರ ಗೌಡ ಸುರುಳಿಯವರನ್ನು ಶಾಲಾ ಪರವಾಗಿ ಗೌರವಾರ್ಪಣೆ ಮಾಡಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಮಾಚಾರ್ ಸ್ವಾಗತಿಸಿದರು. ಶಿಕ್ಷಕ ಕರಿಯಣ್ಣ ಗೌಡ ನಿರೂಪಿಸಿ, ದಿನೇಶ್ ಕೆ. ವಂದಿಸಿದರು.