ಕಲ್ಮಂಜ: ಸರಕಾರಿ ಪ್ರೌಢ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

0

ಕಲ್ಮಂಜ: ಆ. 15ರಂದು ಸರಕಾರಿ ಪ್ರೌಢ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಪೂರ್ಣಿಮಾ ಅವರು ಧ್ವಜಾರೋಹಣ ಮತ್ತು ಸ್ವಾತಂತ್ರ್ಯೋತ್ಸವದ ಪ್ರಧಾನ ಭಾಷಣ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂಭ್ರಮದ ಸಮಾರಂಭದಲ್ಲಿ ಶಾಲಾ ಶಿಕ್ಷಕರು, ಕಲ್ಮಂಜ ಗ್ರಾಮದ
ವಿದ್ಯಾಭಿಮಾನಿಗಳು ಎಸ್. ಡಿ. ಎಂ. ಸಿ ಸದಸ್ಯರು ಹಳೆಯ ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಧ್ವಜಾರೋಹಣದ ನಂತರ ಓಂ ಶ್ರೀ ಕೇಬಲ್ ನವರು ಹಾಗೂ ಕಲ್ಮಂಜ ಗ್ರಾಮ ಪಂಚಾಯತ್ ನವರು ನೀಡಿದ ಸಿಹಿ ತಿಂಡಿ ವಿತರಿಸಲಾಯಿತು.

ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಲ್ಮಂಜ ಪ್ರೌಢಶಾಲೆಯ ನಿಕಟಪೂರ್ವ ಎಸ್. ಡಿ. ಎಂ. ಸಿ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟಿ ಅವರು ದೇಶಭಕ್ತಿ ಗೀತೆಯನ್ನು ಹಾಡಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ಹಳೆ ವಿದ್ಯಾರ್ಥಿ ಸಂಘದ
ಅಧ್ಯಕ್ಷ ನವೀನ್ ಕುಮಾರ್ ಅವರು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.

ಅಕ್ಷಯ ನಗರದ ಸಂಗಮ್ ಫ್ರೆಂಡ್ಸ್ ನ ರಾಜ್ ಕೃಷ್ಣ ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ನೀಡಿದರು. ಕೊಡುಗೈ ದಾನಿಗಳಾದ ಅಕ್ಷಯನಗರದ ಕಂದೂರು ಪ್ರಭಾಕರ ಶೆಟ್ಟಿ ಅವರು ನೀಡಿದ ಸವಿಯೂಟವನ್ನು ನೀಡಿದರು. ಸಂಘದ ಕಾರ್ಯದರ್ಶಿ ವಿಜಿತ ಸ್ವಾಗತಿಸಿದರು. ಸಮಾಜ ವಿಜ್ಞಾನ ಸಂಘದ ಅಧ್ಯಕ್ಷೆ ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಸಂತಿ ಅವರು ವಂದಿಸಿದರು.

LEAVE A REPLY

Please enter your comment!
Please enter your name here