
ಉಜಿರೆ: ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಧ್ವಜಾರೋಹಣದ ಮೂಲಕ ಆಚರಿಸಲಾಯಿತು. ಉಜಿರೆಯ ಖ್ಯಾತ ಉದ್ಯಮಿ ಪ್ರಶಾಂತ್ ಜೈನ್ ಧ್ವಜಾರೋಹಣ ನೆರವೇರಿಸಿ ಶುಭಾಶಯ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್, ಕಾಲೇಜಿನ ಉಪ ಪ್ರಾಂಶುಪಾಲ ಮನೀಶ್ ಕುಮಾರ್, ದೈಹಿಕ ಶಿಕ್ಷಕ ಲಕ್ಷ್ಮಣ್ ಜಿ. ಡಿ., ವಸತಿ ನಿಲಯದ ಹಿರಿಯ ನಿಲಯ ಪಾಲಕ ವಿಶ್ವನಾಥ ಉಪಸ್ಥಿತರಿದ್ದು ಸಹಕರಿಸಿದರು.
ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗವಹಿಸಿದರು.