ಅನುಗ್ರಹ ಟ್ರೈನಿಂಗ್ ಕಾಲೇಜಿನ ಶಿಕ್ಷಣ ಹಾಗೂ ವಿದ್ಯಾರ್ಥಿ ಹಿತಾಸಕ್ತಿಯ ಬಗ್ಗೆ ಸರ್ಕಾರದ ಮಂತ್ರಿಗಳೊಂದಿಗೆ ಪ್ರಮುಖ ಮಾತುಕತೆ

0

ಬೆಳ್ತಂಗಡಿ: ಬೆಳ್ತಂಗಡಿ ಮತ್ತು ಮುಡಿಪಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು, ವಿದ್ಯಾರ್ಥಿಗಳಿಗೆ ತಾಂತ್ರಿಕ, ವೃತ್ತಿಪರ, ಡಿಪ್ಲೋಮಾ ಶಿಕ್ಷಣದ ಜೊತೆಗೆ SSLC ಹಾಗೂ PUC ನೇರ ಪರೀಕ್ಷೆಯ ಸೌಲಭ್ಯ ಒದಗಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಇದನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನ ಪ್ರತಿನಿಧಿಗಳು, ರಾಜ್ಯ ಸರ್ಕಾರದ ಸಭಾಧ್ಯಕ್ಷರಾದ ಯು.ಟಿ. ಖಾದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಶರಣ ಬಸಪ್ಪ ಪಾಟೀಲ್ ಅವರನ್ನು, ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರ ಮೂಲಕ ಭೇಟಿಯಾಗಿ, ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ವಿವಿಧ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್‌ಗಳು ಕುರಿತು ಮಾಹಿತಿ ನೀಡಿದರು. ಅದರ ಜೊತೆ SSLC ಮತ್ತು PUC ನೇರ/ಖಾಸಗಿ ಪರೀಕ್ಷೆಗಳ ಅವಕಾಶಗಳು ಹಾಗೂ ಇದರ ಪ್ರಯೋಜನವನ್ನು ಜಿಲ್ಲೆಯ ವಿದ್ಯಾರ್ಥಿಗಳಿಗೆ ತಲುಪಿಸುವ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸಹಾಯ ಹಾಗೂ ಸರ್ಕಾರಿ ಯೋಜನೆಗಳ ಪ್ರಯೋಜನ ತಲುಪಿಸಲು ಕ್ರಮ ಕೈಗೊಳ್ಳುವ ಚರ್ಚೆ ನಡೆಸಲಾಯಿತು.

ಇದೇ ವೇಳೆ, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ (KMDC) ಇದರ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾದ ಅನುಗ್ರಹ ಟ್ರೈನಿಂಗ್ ಕಾಲೇಜಿನ ಆಡಳಿತ ಮಂಡಳಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಸರ್ಕಾರಿ ಯೋಜನೆಗಳ ಸದುಪಯೋಗ ಹಾಗೂ ಫಲಾನುಭವಿಗಳಿಗೆ ನೇರವಾಗಿ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ವಿಶೇಷ ಚರ್ಚೆ ನಡೆಸಿದರು.

ದ.ಕ ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ, ತಾಂತ್ರಿಕ ಕೌಶಲ್ಯ ಹಾಗೂ ಸರ್ಕಾರದ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ, ಉದ್ದೇಶದಿಂದ ಸರ್ಕಾರದ ಮಂತ್ರಿಗಳೊಂದಿಗೆ ಹಾಗೂ KMDC ಅಧಿಕಾರಿಗಳೊಂದಿಗೆ ನಡೆದ ಮಾತುಕತೆ ವಿದ್ಯಾರ್ಥಿ ಹಿತಾಸಕ್ತಿಗೆ ಹೊಸ ದಾರಿ ತೆರೆಯಲಿದೆ” ಎಂದು ಅನುಗ್ರಹ ಟ್ರೈನಿಂಗ್ ಕಾಲೇಜಿನ ಮ್ಯಾನೇಜಿಂಗ್ ಡೈರೆಕ್ಟರ್ ಎಂ ಜಿ ತಲ್ಹತ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂಲಕ, ಅನುಗ್ರಹ ಟ್ರೈನಿಂಗ್ ಕಾಲೇಜು ಜಿಲ್ಲೆಯ ವಿದ್ಯಾರ್ಥಿಗಳಿಗೆ ಸರ್ಕಾರದ ಸಹಯೋಗದೊಂದಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ಕಟ್ಟಿಕೊಡುವ ದೃಢ ನಿಲುವು ತೋರಿಸಿದೆ.

LEAVE A REPLY

Please enter your comment!
Please enter your name here