
ಉಜಿರೆ: ಬಿಜೆಪಿ ನಾಯಕ ಬಿ ಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ದಾಖಲಾದ ಕೇಸ್ ಹಿನ್ನಲೆ ಇಂದು ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ಬಂಧನಕ್ಕೆ ಉಜಿರೆಗೆ ಆಗಮಿಸಿದರು.
ಈ ವೇಳೆ ಮಹೇಶ್ ಶೆಟ್ಟಿ ಪರ ವಕೀಲರು ಪೊಲೀಸರನ್ನು ಕಾನೂನಾತ್ಮಕವಾಗಿ ಪ್ರಶ್ನಿಸಿದಾಗ ವಿಸ್ತೃತ ಚರ್ಚೆ ನಡೆದಿದೆ. ಗಿರೀಶ್ ಮಟ್ಟಣ್ಣನವರ್ ಕೂಡ ಪ್ರಶ್ನಿಸಿದರು. ನಂತರ ಬಹಳ ಕಾಲ ತಿಮರೋಡಿ ಮನೆಯಲ್ಲಿ ಹೈಡ್ರಾಮ ನಡೆದು, ಅಂತಿಮವಾಗಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ.