
ಬೆಳಾಲು: ಬೆಳ್ತಂಗಡಿ ಶಾಲಾ ಶಿಕ್ಷಣ ಇಲಾಖೆ, ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇವರ ಜಂಟಿ ಆಶ್ರಯದಲ್ಲಿ ಹಳೆಪೇಟೆ ಉಜಿರೆ, ಮುಂಡಾಜೆ ಹಾಗೂ ಅಣಿಯೂರು ಕ್ಲಸ್ಟರ್ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಆ. 22ರಂದು ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಬೆಳ್ತಂಗಡಿ ತಾಲೂಕು ಉಜಿರೆ ವಲಯದ 14 ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಸ. ಉ. ಪ್ರಾ. ಶಾಲೆ ಮುಂಡಾಜೆ ಹೆಣ್ಣು ಮಕ್ಕಳು ಅಂತಿಮ ಹಣಾಹಣಿಯಲ್ಲಿ ಬದನಾಜೆ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.