ತೀರ್ಥಹಳ್ಳಿ ಕ್ಷೇತ್ರ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ವಾಹನ ಜಾಥಾ

0

ಧರ್ಮಸ್ಥಳ: ಮಾಜಿ ಸಚಿವ, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಆ.23ರಂದು ಧರ್ಮ ರಕ್ಷಣಾ ಯಾತ್ರೆ ತೀರ್ಥಹಳ್ಳಿಯಿಂದ ಧರ್ಮಸ್ಥಳಕ್ಕೆ ವಾಹನ ಜಾಥಾ ನಡೆಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡು, ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು ಧರ್ಮಸ್ಥಳ ಕ್ಷೇತ್ರದ ಮೇಲಿರುವ ಧಾರ್ಮಿಕ ಭಾವನೆಯನ್ನು ಜನರ ಮನಸ್ಸಿನಿಂದ ಯಾರಿಂದಲೂ ಅಳಿಸಲಾಗದು. ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸರ್ಕಾರ ಮಾಡಲಾಗದ ಕೆಲಸವನ್ನು ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಕ್ಷೇತ್ರದಿಂದ ನಡೆಸಲಾಗುತ್ತಿದ್ದು ಮದ್ಯವರ್ಜನ ಶಿಬಿರ ಮುಂತಾದ ಕಾರ್ಯಗಳ ಮೂಲಕ ಸಾವಿರಾರು ಕುಟುಂಬಗಳಿಗೆ ಬದುಕು ನೀಡಲಾಗಿದೆ ಎಂದರು.

ತಲೆ ಬುರುಡೆಯನ್ನು ತಂದ ಮುಸುಕುಧಾರಿಯ ಕೃತ್ಯವನ್ನು ಪರಿಶೀಲಿಸದೆ ಸಿನಿಮಾ ರೀತಿಯ ಕಥೆ ಹೆಣೆದು ಷಡ್ಯಂತ್ರವನ್ನು ಹೂಡುವ ಮೂಲಕ ಧರ್ಮಸ್ಥಳದ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here