
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಶಾರದಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ ಪಿಯುಸಿಯ ಚೇತನಾ ಕುಮಾರಿ ಎಸ್. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿಯ ಆರ್. ಕೃಷ್ಣ ಬಾಲಕರ ವಿಭಾಗದಲ್ಲಿ ಐದನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ತಂಡದಿಂದ ಪ್ರಥಮ ಪಿಯುಸಿಯ ಪ್ರಜ್ವಲ್ ಎ.ಬಿ., ಸೌಮಿತ್ ಸುಮಂತ್ ಶಾನಭಾಗ್, ಸಂಹಿತ್ ರಾವ್ ,ಅಥರ್ವ ಬೋದಾಸ್, ಭವಿಷ್ ಗೌಡ ಜಿ.ಎಸ್. ದಹಾಗೂ ಬಾಲಕಿಯರ ತಂಡದಿಂದ ಪ್ರಥಮ ಪಿಯುಸಿ ವೈಷ್ಣವಿ ಕೃಷ್ಣಾಜಿ ಪೂಜಾರಿ , ವರ್ಷ ಆರ್., ದ್ವಿತೀಯ ಪಿಯುಸಿ ಅನುಷ್ಕಾ ಆರ್. ಚೈತನ್ಯ ಪಿ, ಅನರ್ಘ್ಯ ಎನ್., ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗೆ ವೈಬ್ರೆಂಟ್ ಎಜುಕೇಷನ್ ಮತ್ತು ಚಾರಿಟೆಬಲ್ ಟ್ರಸ್ಟ್ ನ ಟ್ರಸ್ಟಿಗಳಾದ ಮೆಹಬೂಬ್ ಬಾಷಾ, ಚಂದ್ರಶೇಖರ್ ರಾಜೇ ಅರಸ್, ಯೋಗೇಶ್ ಬೆಡೆಕರ್, ಸುಭಾಷ್ ಝಾ, ಡಾ. ಎಸ್.ಎನ್.ವೆಂಕಟೇಶ್ ನಾಯಕ್ ಮತ್ತು ಶರತ್ ಗೋರೆ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.