ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ಸೆ.6ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವನ್ನು ದೀಪ ಪ್ರಜ್ವಲನೆಗೊಳಿಸಿ ಉದ್ಘಾಟಿಸಿದ ಆರಿಕೋಡಿ ಶ್ರೀ ಚಾಮುಂಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ವಿದ್ಯಾರ್ಥಿಗಳಲ್ಲಿ ಮಾನಸಿಕ ದೃಢತೆಯನ್ನು ಕಾಪಾಡಿಕೊಳ್ಳಲು ಚೆಸ್ ಅತೀ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಅವರು ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಲ್ಲಿ ಮಾನಸಿಕ, ದೈಹಿಕ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಸಂಸ್ಥೆಯು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಒಳಿತು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ವಾಣಿ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದ ಬಗ್ಗೆಪ್ರಶಂಸನೀಯ ಮಾತುಗಳನ್ನಾಡುತ್ತ, ಕ್ರೀಡಾಳುಗಳಿಗೆ ಶುಭಹಾರೈಸಿದರು. ನಗರ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ತಾಲೂಕು ದೈಹಿಕ ಶಿಕ್ಷಣಾಧಿಕಾರಿಯಾದ ಸುಜಯ, ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಚಿಕಿತ್ಸಾ ಫಾರ್ಮ ಮಾಲಕ ಶ್ರೀಶ ಮುಚ್ಚಿನಾಯ, ಪಪ್ಪು ಸೌಂಡ್ಸ್ ಮತ್ತು ಲೈಟಿಂಗ್ಸ್ ಮಾಲಕ ಮಹಮ್ಮದ್ ಶಬೀರ್ ಮತ್ತು ಶ್ರೀ ಚಾಮುಂಡೇಶ್ವರಿ ಶಿಲ್ಪ ಕಲಾ ಕೇಂದ್ರ ಪಿಲಿಗೂಡು ಇದರ ಮಾಲಕ ಪದ್ಮನಾಭ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ಉಪಾಧ್ಯಕ್ಷೆ ಚಿತ್ರಲತಾ ಎ., ತಾಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ತಾಲೂಕು ಮತ್ತು ಜಿಲ್ಲೆಯ ದೈಹಿಕ ಶಿಕ್ಷಕ ಸಂಘಟನೆ ಅಧ್ಯಕ್ಷರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿ, ಸಹಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಎಲ್ಲಾ ಶಿಕ್ಷಕರು ಸಹಕರಿಸಿದರು.ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಸುಹಾಸಿನಿ ಎ. ವಂದಿಸಿದರು.