ಗುರುವಾಯನಕೆರೆ: ಪಣೆಜಾಲು ಸಮೀಪ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ಸೆ. 11ರಂದು ರಾತ್ರಿ ನಡೆದಿದೆ.

ಗುರುವಾಯನಕೆರೆಯಿಂದ ಉಪ್ಪಿನಂಗಡಿ ಮಾರ್ಗವಾಗಿ ತೆರಳುತ್ತಿದ್ದ ಸ್ಕೂಟರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ವಾಹನ ಸವಾರ ಆಕಾಶ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಗ್ರೇಷಿಯನ್ ಇಬ್ಬರಿಗೂ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸತೀಶ್ ಆಚಾರ್ಯ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣದ ದಾಖಲಿಸಿಕೊಂಡಿದ್ದಾರೆ.