ಬೆಳ್ತಂಗಡಿ: ತಾಲೂಕು ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕಡಿರುದ್ಯಾವರ, ಕೊಡಿಯಾಲಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ 14ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಕೊಡಿಯಾಲಬೈಲು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಘವೇಂದ್ರ ಪಟವರ್ಧನ್ ಅಧ್ಯಕ್ಷತೆಯಲ್ಲಿ ಕಡಿರುದ್ಯಾವರ, ಕೊಡಿಯಾಲಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಸುಜಯ, ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಾನಂದ, ಜಿಲ್ಲಾ ಪ್ರಾಥಮಿಕ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ ಗೌಡ, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಎನ್ಕುಡೆ, ಸೂರಜ್ ವಳಂಬ್ರ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಫಿಲೋಮಿನ ಸಿ.ಜೆ. ಸ್ವಾಗತಿಸಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜನಾರ್ಧನ ಕಾನರ್ಪ ನಿರೂಪಿಸಿದರು. ಸಹಶಿಕ್ಷಕಿ ಶ್ವೇತಾ ವಿ. ಹೆಚ್. ಧನ್ಯವಾದವಿತ್ತರು.