ಇಂದಬೆಟ್ಟು: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಬೆಂಗಳೂರು ಅವರಿಂದ 2025-2026ನೇ ಸಾಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕೌನ್ಸೆಲಿಂಗ್ ಮೂಲಕ ವರ್ಗಾವಣೆಯಲ್ಲಿ ಮಲವಂತಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಶ್ಮಿ ಬಿ.ಪಿ. ಅವರನ್ನು ತಕ್ಷಣದ ಆದೇಶದಿಂದ ಇಂದಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೆ. 12ರಂದು ವರ್ಗಾವಣೆಗೊಳಿಸಿ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಅವರು ಇಂದಬೆಟ್ಟು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.