ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

0

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಬಂಟರ ಯಾನೆ ನಾಡವರ ಮಾತೃ ಸಂಘ, ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ, ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಂಗಳೂರು ಬಂಟರ ಸಂಘ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಸೆ. 14ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಸಂಘದ ಗೌರವ ಮಾರ್ಗದರ್ಶಕ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿ ಶುಭ ಹಾರೈಸಿದರು.

ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಲಯದ ಪ್ರೊಫೆಶನ್ ಎ.ಸಿ.ಎಫ್ ಹಸ್ತಾ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ವಿಜಯ ಜೆ. ಶೆಟ್ಟಿ ಹಾಲಾಡಿ, ಮಂಗಳೂರು ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಜಯರಾಜ್ ಬಿ. ರೈ , ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಉಪಾಧ್ಯಕ್ಷ ಜಯಂತ ಶೆಟ್ಟಿ ಕುಂಟಿನಿ ಮಾತೃ ಸಂಘ ತಾಲೂಕು ಸಂಚಾಲಕ ಜಯರಾಮ ಭಂಡಾರಿ ಧರ್ಮಸ್ಥಳ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಭಾಗವಹಿಸಿದ್ದರು.

ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ ಉಜಿರೆ, ನವೀನ್ ಸಾಮಾನಿ ಕರಂಬಾರು ಬೀಡು, ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ದಾ, ಜತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯಲಕ್ಷ್ಮೀ ಎನ್.ಯುವ ವೇದಿಕೆಯ ಅಧ್ಯಕ್ಷ ಪ್ರತೀಕ್ ನೊಚ್ಚ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಧಿ ಸಂಚಾಲಕ ಅಜಿತ್ ಜಿ. ಶೆಟ್ಟಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here