


ಬೆಳ್ತಂಗಡಿ: ಭರತನಾಟ್ಯ ಕಲಾವಿದೆ, ನೃತ್ಯ ಗುರು ವಿದುಷಿ ವಿದ್ಯಾ ಮನೋಜ್ ಅವರು ಶಾಂತಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಕಲ್ಲಡ್ಕದಲ್ಲಿ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಸೆ. 28ರಿಂದ ಅ. 2ರವರೆಗೆ ನಡೆಯುವ 48ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ಶಾಂತಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಯತಿನ್ ಕುಮಾರ್ ಹಾಗೂ ಕಾರ್ಯದರ್ಶಿ ವಜ್ರನಾಥ ಕಲ್ಲಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 
            
