ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆ.15ರಂದು ಇಂಜಿನಿಯರ್ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಅವರು ದಿನದ ಮಹತ್ವವನ್ನು ವಿವರಿಸಿ, ಸರ್. ಎಂ. ವಿಶ್ವೇಶ್ವರಯ್ಯ ಅವರ ಜೀವನದಿಂದ ವಿದ್ಯಾರ್ಥಿಗಳು ಪ್ರೇರಣೆ ಹೊಂದುವಂತಾಗಲಿ ಎಂದು ಹೇಳಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ರವೀಶ್ ಅವರು ವಿಶ್ವೇಶ್ವರಯ್ಯ ಅವರ ತಾಂತ್ರಿಕ ಸಾಧನೆಗಳು ಮತ್ತು ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಿದರು. ಪ್ರಾಂಶುಪಾಲರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸರ್. ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.