ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ಸೆ.22ರಂದು ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಸ್ಕಾಲರ್ ಶಿಪ್ ನೀಡಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.