ಬೆಳ್ತಂಗಡಿ: ಸೆ. 18ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ಸಹಯೋಗದೊಂದಿಗೆ ವಾಣಿಜ್ಯ ಸಂಘದ ಉದ್ಘಾಟನೆ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಡಬಿದಿರೆ ಶ್ರೀ ಧವಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಾರ್ಶ್ವನಾಥ ಅಜ್ರಿ ವಾಣಿಜ್ಯ ಸಂಘ ಉದ್ಘಾಟನೆಯನ್ನು ನೆರವೇರಿಸಿ ಸಭೆಯನ್ನುದ್ಧೇಶಿಸಿ ಮಾತನಾಡುತ್ತಾ, ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣೆಗೆಯಲ್ಲಿ ಪಠ್ಯೇತರ ಚಟುವಟಿಕೆಗಳು ಪರಿಣಾಮಕಾರಿಯಾದ ಪಾತ್ರ ವಹಿಸುತ್ತದೆ ಮತ್ತು ವಾಣಿಜ್ಯ ಸಂಘದ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ತಿಳಿಸಿದರು.
ನೂತನ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ರವಿ ಎಂ.ಎನ್. ವಾಣಿಜ್ಯ ಸಂಘದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ, ವಾಣಿಜ್ಯ ವಿಭಾಗದ ಮುಖ್ಯಸ್ಠ ಪ್ರೊ.ಪದ್ಮನಾಭ ಕೆ ಆಯ್ಕೆ ವಿದ್ಯಾರ್ಥಿಗಳ ನಾಯಕತ್ವದ ಕುರಿತಾಗಿ ಶ್ಲಾಘನೆಯ ಮಾತುಗಳನ್ನಾಡಿ ವಾಣಿಜ್ಯ ಸಂಘದ ಎಲ್ಲಾ ಯೋಜಿತ ಚಟುವಟಿಕೆಗಳು ಕಾರ್ಯಗತವಾಗಲು ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಂಚಾಲಕರಾದ ಡಾ.ಕುಶಾಲಪ್ಪ ಎಸ್. ವಾಣಿಜ್ಯ ಸಂಘವು ಸಕ್ರಿಯವಾಗಿ ಕೆಲಸ ನಿರ್ವಹಿಸಲಿ ಮತ್ತು ಎಲ್ಲಾ ಸದಸ್ಯರಿಗೂ ಇದರ ಪ್ರಯೋಜನ ಸಿಗುವಂತಾಗಲಿ ಎಂದು ತಿಳಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಪ್ರೊ.ಸುರೇಶ್ ವಿ ವಾಣಿಜ್ಯ ಸಂಘದ ನೂತನ ಪದಾಧಿಕಾರಿಗಳನ್ನು ಆಭಿನಂದಿಸಿ, ಸಂಘದ ಬೆಳವಣಿಗೆಯೊಂದಿಗೆ ತಮ್ಮನ್ನು ತೊಡಗಿಸಿಕೊಂಡು ಸಂಸ್ಥೆಗೆ ಸಮಾಜಕ್ಕೆ ವಿಶೇಷ ಕೊಡುಗೆ ನೀಡುವಂತೆ ಕರೆ ನೀಡಿದರು.
ಎಂ.ಕಾಂ. ವಿದ್ಯಾರ್ಥಿನಿ ಪೂರ್ಣಿಮಾ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪ್ರಜ್ಙಾ ಸ್ವಾಗತಿಸಿದರು. ಮತ್ತು ವಾಣಿಜ್ಯ ಸಂಘದ ಸಂಚಾಲಕ ನವೀನ್ ಪ್ರಸ್ತಾವಿಕ ಮಾತುಗಳಾನ್ನಾಡಿದರು. ವಾಣಿಜ್ಯ ಸಂಘದ ಚಟುವಟಿಕೆಗಳ ಈ ವರ್ಷದ ಕಾರ್ಯಸೂಚಿಯನ್ನು ವಾಣಿಜ್ಯ ಸಂಘದ ಅಧ್ಯಕ್ಷ ಕೌಶಿಕ್ ಮಂಡಿಸಿದರು. ಮತ್ತು ಅಂತಿಮ ಬಿ.ಕಾಂ ವಿಭಾಗದ ವರ್ಷಾ ಅತಿಥಿ ಪರಿಚಯ ಮಾಡಿದರು. ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಮಿಸ್ಬಾ ನಿರ್ವಹಿಸಿದರು. ಕಾರ್ಯಕ್ರಮವು ಸ್ನಾತಕೋತ್ತರ ವಿಭಾಗದ ವಾಣಿಜ್ಯ ಸಂಘದ ಸಂಚಾಲಕಿ ವಾಣಿವರ ವಂದಿಸಿದರು.