ರಸ್ತೆ ಸುರಕ್ಷತೆ ಹಾಗೂ ಸಂಚಾರ ಮುನ್ನೆಚ್ಚರಿಕೆ’ ಅರಿವು ಕಾರ್ಯಕ್ರಮ

0

ಬೆಳ್ತಂಗಡಿ : ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಸೆ.20ರಂದು ವಿದ್ಯಾರ್ಥಿಗಳಿಗೆ ಪೊಲೀಸ್ ಸಂಚಾರ ಠಾಣೆ ಹಾಗೂ ವರ್ತಕರ ಸಂಘ, ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ‘ರಸ್ತೆ ಸುರಕ್ಷತೆ ಹಾಗೂ ಸಂಚಾರ ಮುನ್ನೆಚ್ಚರಿಕೆ’ಯ ಬಗ್ಗೆ ಮಾಹಿತಿ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಅರ್ಜುನ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ‘ಸಂಚಾರಿ ನಿಯಮಗಳ ಪಾಲನೆ ಮಾಡುವುದರಿಂದ, ಅಪಘಾತಗಳನ್ನು ತಪ್ಪಿಸಬಹುದು ಹಾಗೂ ನಾವು ಸಂಚಾರಿ ನಿಯಮಗಳನ್ನು ಪಾಲಿಸಿ, ನಮ್ಮ ಸುರಕ್ಷತೆಯ ಜೊತೆಗೆ ಇತರರಿಗೂ ಪ್ರೇರಣೆ ನೀಡುವಂತೆ ಮನವರಿಕೆ ಮಾಡಿದರು. ಈ ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ರೊನಾಲ್ಡ್‌ ಲೋಬೊ, ಮಾಲಕರು ಲೋಬೊ ಮೋಟರ್ಸ್ ಬೆಳ್ತಂಗಡಿ, ಕಾರ್ಯದರ್ಶಿ ಲಾನ್ಸಿ ಪಿರೇರಾ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here