ಇಳಂತಿಲ: ಈಶ್ವರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

0

ಇಳಂತಿಲ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಳ್ತಂಗಡಿ ತಾಲೂಕು ಪಂಚಾಯತ್, ಈಶ್ವರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಸವಿತ ಅವರ ಅಧ್ಯಕ್ಷತೆಯಲ್ಲಿ ಇಳಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.23ರಂದು ಜರಗಿತು.

ತಾಲೂಕು ಕೃಷಿ ಜೀವನೋಪಾಯ ಕ್ಷೇತ್ರ ಮೇಲ್ವಿಚಾರಕ ಬಂಗಾರಪ್ಪ ಅವರು ಕೃಷಿಯ ಬಗ್ಗೆ ಮಾಹಿತಿ ನೀಡಿ ಅದರಲ್ಲಿ ನೈಸರ್ಗಿಕ ಕೃಷಿ ಪದ್ಧತಿಯನ್ನು ಮತ್ತು ಸಾವಯವ ಗೊಬ್ಬರವನ್ನು ಬಳಸಿಕೊಂಡು ಉತ್ತಮ ಇಳುವರಿಯನ್ನು ಪಡೆಯಬಹುದು ಎಂದು ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಮಧುಶ್ರೀ ಅವರು ಪೌಷ್ಟಿಕ ಆಹಾರ ಕೊರತೆಯಿಂದ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ಯಾವ ರೀತಿಯ ಪೋಷಕಾಂಶಯುಕ್ತ ಆಹಾರಗಳನ್ನು ತಿನ್ನಬೇಕು ಎಂಬುದರ ಬಗ್ಗೆ ವಿಸ್ತಾರವಾದ ಮಾಹಿತಿಗಳನ್ನು ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM) ಬಗ್ಗೆ ಸಂಪೂರ್ಣ ಸಮಗ್ರವಾದ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ ಮತ್ತು ಗ್ರಾಮ ಪಂಚಾಯತ್ ಕಾರ್ಯದರ್ಶಿ ವಿಜಯ, ಜಿಲ್ಲಾ ವ್ಯವಸ್ಥಾಪಕಿ ಶಕುಂತಲಾ ಬೆಳ್ತಂಗಡಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಎಲ್ಲಾ ಸಂಘದ ಸದಸ್ಯರು ತಮ್ಮ ಮನೆಯಲ್ಲಿ ತಯಾರಿಸಿ ತಂದ ಹಲವು ಬಗೆಯ ಪೌಷ್ಠಿಕ ಆಹಾರಗಳನ್ನು ಸಭೆಯ ಮುಂದೆ ಪ್ರದರ್ಶನಕ್ಕೆ ಇಡಲಾಗಿತ್ತು. ಕಾರ್ಯಕ್ರಮವನ್ನು LCRP ಚೇತನಾ ಸ್ವಾಗತಿಸಿ, MBK ಪವಿತ್ರ ನಿರೂಪಣೆ ಮಾಡಿದರು. LCRP ಶಾಲಿನಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here