ವೇಣೂರು: ಬೆಳ್ತಂಗಡಿಯಿಂದ ಮೂಡುಬಿದಿರೆ ಹೋಗುತ್ತಿದ್ದ ಶ್ರೀ ಕೃಷ್ಣ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಂಚರಿಸುತ್ತಿದ್ದ ಜೀಪು ನಡುವೆ ರಸ್ತೆ ಅಪಘಾತ ಸಂಭವಿಸಿದ ಘಟನೆ ಸೆ.25ರಂದು ಸಂಜೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಪೇಟೆಯಲ್ಲಿ ನಡೆದಿದೆ.
ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.