ಬೆಳ್ತಂಗಡಿ: ಜೈನ ಬಸದಿಗಳ ಮುಖ್ಯ ಅರ್ಚಕ ಹಾಗೂ ಸಹಾಯಕ ಅರ್ಚಕರಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲ ಆಗುವಂತೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿ ಮಾಡಿದ್ದಾರೆ. ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಝಮೀರ್ ಹಾಗೂ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರಿಸಿದ್ದಾರೆ.
ಸರ್ಕಾರಕ್ಕೆ ನಾಭಿರಾಜ ಜೈನ್ ಹಾಗೂ ಕರ್ನಾಟಕ ಸರಕಾರಕ್ಕೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದರು.