ಉಜಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ. ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ಸಮುದಾಯ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಐಇಸಿ /ಹೆಚ್. ಆರ್. ಡಿ. ಚಟುವಟಿಕೆಗಳನ್ನು ನಡೆಸಲು ಸದಸ್ಯರಿಗೆ ತರಬೇತಿ ಕಾರ್ಯಾಗಾರ ಸೆ. 26ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಉದ್ಘಾಟಿಸಿ ಶುಭ ಹಾರೈಸಿದರು. ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ, ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯ ಕುಮಾರ್, ಜಿ.ಪಂ. ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ವಿಘ್ನಶ್ ರಾಜ್ ಬಿ. ಕೆ., ಗ್ರಾಮೀಣ ಕುಡಿಯುವ ನೀರು ಇಲಾಖೆಯ ಜೆ. ಇ. ಲಕ್ಷ್ಮೀ, ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ನಂತರ ಜೆಲಜೀವನ್ ಮಿಷನ್ ಯಶಸ್ವಿ ಕಾರ್ಯಾಚರಣೆ ಬಗ್ಗೆ ಸುರೇಶ್ ಬಾಳಿಲ, ಅಸ್ಮಿತಾ, ನಾಗಲಿಂಗಯ್ಯ ಸ್ವಾಮಿ, ಶರತ್ ಕುಮಾರ್ ಹಾಜರಿದ್ದು ವಿವಿಧ ತರಬೇತಿ ನೀಡಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಕಾರ್ಯಕರ್ತರು ತರಬೇತಿ ಶಿಬಿರದಲ್ಲಿ ಪಾಲ್ಗೊಂದಿದ್ದರು. ಜೆ ಜೆ ಎಂ ತಂಡದ ನಾಯಕ ಮಿಥುನ್ ಕುಮಾರ್, ಸಂಯೋಜಕಿ ಧರ್ಮಶ್ರೀ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು. ಜೆಜೆಎಂ ಸಂಯೋಜಕ ಶಿವರಾಮ ಪಿ. ಬಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.