ಬೆಳ್ತಂಗಡಿ: ತಾಲೂಕಿನ ಪ್ರಸಿದ್ದ ಶಿಕ್ಷಣ ಸಂಸ್ಥೆ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ ಸೆ. 29ರಂದು ನಡೆಯಿತು. ಬೆಳ್ತಂಗಡಿ ತಾಲೋಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ನಿರ್ಮಿಸಿರುವ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆ ಸಂಧರ್ಭದಲ್ಲಿ ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಶಾರದಾ ಮಾತೆಯ ವಿಗ್ರಹವನ್ನು ಶಿಕ್ಷಣ ಸಂಸ್ಥೆಗೆ ಉಡುಗೊರೆಯಾಗಿ ನೀಡಿದ್ದರು.
ಈ ನಿಟ್ಟಿನಲ್ಲಿ ಸಂಸ್ಥೆಯ ಆವರಣದಲ್ಲಿ ಸುಂದರವಾದ ಪೀಠ ನಿರ್ಮಾಣ ಮಾಡಿ ನವರಾತ್ರಿಯ ಸಂಧರ್ಭದಲ್ಲಿ ಪುರೋಹಿತರ ಮೂಲಕ ಪೂಜಾ ಕಾರ್ಯಗಳು ನಡೆದು ಶಾರದಾ ಮಾತೆಯ ಮೂರ್ತಿ ಪೀಠಾರ್ಪಣೆ ನಡೆಯಿತು. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಗೂ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಜಯಾನಂದ ಗೌಡ, ಪ್ರಾಂಶುಪಾಲರಾದ ವಿಷ್ಣುಪ್ರಕಾಶ್, ಆಡಳಿತಧಿಕಾರಿ ಪ್ರಸಾದ್, ಶಿಕ್ಷಣ ಸಂಸ್ಥೆಯ ನಿರ್ದೇಶಕರು, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರು, ಪದಾಧಿಕಾರಿಗಳು, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರು ಲಕ್ಷ್ಮೀ ನಾರಾಯಣ್ ಕೆ., ಕಾಲೇಜಿನ ಉಪನ್ಯಾಸಕ ವೃಂದ, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.