ಗೇರುಕಟ್ಟೆ:ಕಳೆದ ಏಳು ವರ್ಷಗಳಿಂದ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಜನಸ್ನೇಹಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಪಾಟೀಲ್ ಸೆ.28ರಂದು ತವರು ಜಿಲ್ಲೆ ಬೆಳಗಾವಿಗೆ ವರ್ಗಾವಣೆಯಾಗಿದ್ದಾರೆ.
ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ, ಕುಕ್ಕೇಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ ಕೆ. ಪ್ರಭಾರ ನೆಲೆಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಕುಂಞ ಕೆ. ಅವರು ಈ ಹಿಂದೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.