ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆ. 29ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸಮಠ, ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ್ ರಾವ್ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.