ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

0

ಬೆಳ್ತಂಗಡಿ: ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಎಂ.ಎ. ಗಫೂರ್ ಅವರು ಅ.6ರಂದು ಕುದ್ಮುಲ್ ರಂಗರಾವ್ ಮಿನಿ ಪುರಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಇದರ ಸಂಕ್ರೀಯ ಸಂಘಟಕ ಹಾಗೂ ದ.ಕ ವಕ್ಫ್ ಸಲಹಾ ಸಮಿತಿ ಮಾಜಿ ಸದಸ್ಯ ಯು.ಕೆ ಮುಹಮ್ಮದ್ ಹನೀಫ್ ಅವರು ನೂತ‌ನ ಅಧ್ಯಕ್ಷರಿಗೆ ಶಾಲು ಹೊದಿಸಿ ಹೂ ಗುಚ್ಛ ನೀಡಿ ಶುಭ ಕೋರಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪದಗ್ರಹಣ ಸಮಾರಂಭದಲ್ಲಿ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಮಂಜುನಾಥ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಶಾಸಕ ಜೆ.ಆ‌ರ್. ಲೋಬೋ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಪದ್ಮರಾಜ್, ಚೇತನ್ ಬೆಂಗ್ರೆ, ಶಾಲೆಟ್ ಪಿಂಟೋ, ಲಾವಣ್ಯ ಬಳ್ಳಾಲ್, ಪ್ರತಿಭಾ ಕುಳಾಯಿ, ಟಿ.ಎಂ. ಶಹೀದ್, ವಿಶ್ವಾಸ್‌ಕುಮಾ‌ರ್ ದಾಸ್, ಅಶೋಕ್ ಕೊಡವೂರು, ಮಂಜುನಾಥ್, ಪ್ರಸಾದ್ ಕಾಂಚನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here