ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅ. 20ರಂದು ನಡೆಯುವ 6ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025ರ ಪೂರ್ವಭಾವಿ ಸಭೆ ಅ. 8ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಮೋದಿ ಅವರ 75ನೇ ಹುಟ್ಟುಹಬ್ಬದ ಪ್ರಯುಕ್ತ ನಮೋ ಮ್ಯಾರಥಾನ್, ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತವಾಗಿ ಚರ್ಚಿಸಲಾಯಿತು.

ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ, ಪ್ರಭಾರಿಗಳಾದ ಪ್ರಶಾಂತ್ ಪಾರೆಂಕಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ,
ಹಾಗೂ ಮಂಡಲ ಹಾಗೂ ಮಹಾಶಕ್ತಿ ಕೇಂದ್ರ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.