ಬೆಳ್ತಂಗಡಿ: ನಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿಟ್ಲದ ವಿಠಲ ಪದವಿಪೂರ್ವ ಕಾಲೇಜಿನಲ್ಲಿ ಅ. 8ರಂದು ನಡೆದ ಜಿಲ್ಲಾ ಮಟ್ಟದ 17 ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರುತ ಡಿ. ಬಿ. ಅವರು ದ್ವಿತೀಯ ಸ್ಥಾನವನ್ನು ಪಡೆದು ಅ.10 ಮತ್ತು 11ರಂದು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಬೆಳ್ತಂಗಡಿಯಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಸಂಸ್ಥೆಯ ಸಂಚಾಲಕರು ಮುಖ್ಯ ಗುರುಗಳು ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.