ಬಳಂಜ: ದ.ಕ.ಜಿ.ಪಂ.ಉ. ಶಾಲೆಯ ಅಮೃತ ಮಹೋತ್ಸವದ ಅಂಗವಾಗಿ ಯುವ ಉದ್ಯಮಿ ಅಶ್ವಥ್ ಹೆಗ್ಡೆ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನೂತನ ಕಾಮಗಾರಿಗಳ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಪ್ರಗತಿಪರ ಕೃಷಿಕ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ ಬಿಡುಗಡೆ ಮಾಡಿ ಶುಭ ಹಾರೈಸಿದರು.
ಅಮೃತ ಮಹೋತ್ಸವ ಸಮಿತಿಯ ಕೋಶಾಧಿಕಾರಿ ತಿಮ್ಮಪ್ಪ ಪೂಜಾರಿ, ಮಹಮ್ಮಾಯಿ ದೇವಸ್ಥಾನದ ಅಧ್ಯಕ್ಷ ಜಗದೀಶ್ ರೈ, ನಿರ್ದೇಶಕ ಗುರುಪ್ರಸಾದ್ ಹೆಗ್ಡೆ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ವೈ. ಚಂದ್ರಮ, ಅಮೃತ ಮಹೋತ್ಸವ ಸಮಿತಿಯ ಕಾರ್ಯದರ್ಶಿ ಹರೀಶ್ ದೇವಾಡಿಗ, ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈಗಾಗಲೇ ಅಶ್ವಥ್ ಹೆಗ್ಡೆ ಅವರು ಬಳಂಜ ಶಾಲೆಗೆ ಸುಮಾರು 15 ಲಕ್ಷ ರೂಪಾಯಿ ವೆಚ್ಚದಲ್ಲಿ ಟೈಲ್ಸ್ ಅಳವಡಿಸಿ ಶಾಲಾ ಮುಂಭಾಗದಲ್ಲಿ ಇಂಟರ್ ಲಾಕ್ ಅಳವಡಿಸಿದ್ದು ಊರ ವಿದ್ಯಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.