ಜಿಲ್ಲಾ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಶ್ರೀ ಧ.ಮಂ.ಪ.ಪೂ. ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ

0

ಉಜಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಸುಳ್ಯ ಎನ್‌.ಎಂ.ಸಿ ಪದವಿಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಅ.11ರಂದು ನಡೆದ ದ.ಕ. ಜಿಲ್ಲಾ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಹ್ಯಾಟ್ರಿಕ್ ಚಾಂಪಿಯನ್ ಪಟ್ಟವನ್ನು ಗಳಿಸಿದೆ.

ಜೊತೆಗೆ, ಉತ್ತಮ ದಾಳಿಗಾರ ಪ್ರಶಸ್ತಿಯನ್ನು ಕಾರ್ತಿಕ್ ಹಾಗೂ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಸತ್ಯ ಪಡೆದುಕೊಂಡಿದ್ದಾರೆ. ಇದಲ್ಲದೆ, ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತಂಡದ ಆಶಿಷ್, ಕಾರ್ತಿಕ್, ಆಶಿಕ್, ಸೂರ್ಯ, ಚೇತನ್ ಮತ್ತು ಸತ್ಯ ಅವರು ದ.ಕ. ಜಿಲ್ಲೆಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಬಾಲಕರ ವಿಭಾಗದಲ್ಲಿ ಉತ್ತಮ ದಾಳಿಗಾರ ಪ್ರಶಸ್ತಿ ಪಡೆದ ಕಾರ್ತಿಕ್, ಬಾಲಕರ ವಿಭಾಗದಲ್ಲಿ ಉತ್ತಮ ಹಿಡಿತಗಾರ ಪ್ರಶಸ್ತಿ ಪಡೆದ ಸತ್ಯ ಅವರನ್ನು ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ತರಬೇತುದಾರರು ಹಾಗೂ ಬೋಧಕ–ಬೋಧಕೇತರ ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here