ಬೆಳ್ತಂಗಡಿ: ಅಕ್ರಮ ಗೋ ಮಾಂಸ ಸಾಗಾಟ

0

ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ.

ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30 ಕ್ಕೆ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ KA-70-0694 ನಂಬರಿನ ಆಟೋ ರಿಕ್ಷಾವನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ(27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ.

ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು. ಆಟೋದ ಮೌಲ್ಯ ರೂಪಾಯಿ 2,50,000 ಮತ್ತು ಗೋಮಾಂಸದ ಮೌಲ್ಯ 21,250 ರೂಪಾಯಿ ಅಗಿದ್ದು ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 12 ಕರ್ನಾಟಕ ಗೋವಧೆ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 ರಂತೆ
ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ ನೇತೃತ್ವದ ಸಬ್ ಇನ್ಸ್‌ಪೆಕ್ಟರ್ ಆನಂದ ಎಮ್. ಮತ್ತು ಸಿಬ್ಬಂದಿ
ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here