ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್‌ ದಾಳಿ: ಆರೋಪಿಗಳ ಬಂಧನ

0

ಬೆಳ್ತಂಗಡಿ: ಅಕ್ರಮವಾಗಿ ದನವನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ. ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಘಟನೆ ಅ.27ರಂದು ನಡೆದಿದೆ. ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್‌ ಒಳಗಡೆ ಅಕ್ರಮವಾಗಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟ‌ರ್ ಓಮನ ನೇತೃತ್ವದ ತಂಡ ಅ.27ರಂದು ಮಧ್ಯಾಹ್ನ 2:30ಕ್ಕೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ 91 ಕೆ.ಜಿ. ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದು, ಗೋಮಾಂಸ ಮಾಡುತ್ತಿದ್ದ ಬೆದ್ರಬೆಟ್ಟು ನಿವಾಸಿ ಉಸ್ಮಾನ್ ಮಗ ಅಬ್ದುಲ್ ನಝೀರ್(36) ಮತ್ತು ಮಿತ್ತಬಾಗಿಲು ಗ್ರಾಮದ ಅಬ್ದುಲ್ ರಹುಮಾನ್ ಮಗ ಝಕಾರಿಯಾ(36) ಅವರನ್ನು ಬಂಧಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 4,12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಅಧಿನಿಯಮ 2020 ಮತ್ತು ಕಲಂ 33(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಬ್ಬಪುರ್ ಮಠ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್‌ ಅನಂದ್ ಎಮ್. ಮತ್ತು ವೇಣೂರು ಸಬ್ ಇನ್ಸ್‌ಪೆಕ್ಟ‌ರ್ ಓಮನ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here