ಉಜಿರೆ: ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ “ಏಕ ವಲಯ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಮತ್ತು ಆಯ್ಕೆ ಪ್ರಕ್ರಿಯೆ – 2025” ಉಜಿರೆಯ ಕೀರ್ತಿಶೇಷ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಅ.27ರಂದು ವಿಜೃಂಭಣೆಯಿಂದ ಆರಂಭಗೊಂಡು ಅ. 28ರಂದು ಸಮಾರೋಪಗೊಂಡಿತು.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್‌.ಡಿ‌.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಹಾಗೂ ಅಧ್ಯಕ್ಷರಾಗಿ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಯೋಗ ವಿಭಾಗದ ಡೀನ್ ಹಾಗೂ ಶಾಂತಿವನ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಸ್ವಾಗತ ಭಾಷಣ ಮಾಡಿದರು. ಧನ್ಯವಾದ ಪ್ರಸ್ತಾವನೆಯನ್ನು ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ನೀಡಿದರು. ಮೈಸೂರಿನಿಂದ ಆಗಮಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೀಕ್ಷಕ ಮಹೇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಸ್‌.ಡಿ‌.ಎಂ. ನ್ಯಾಚುರೋಪತಿ ಕಾಲೇಜು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ನಡೆದ ಈ ವಿಶೇಷ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 16 ಕಾಲೇಜುಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

LEAVE A REPLY

Please enter your comment!
Please enter your name here