ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯೊಂದಿಗೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ(ಕೇಂದ್ರ ಪಠ್ಯ ಆಧಾರಿತ)ಯ ಸಹ ಪ್ರಾಧ್ಯಾಪಕ ಕಿರಣ್ ರಾಜ್ ಕೆ.ಆರ್. ಉದ್ಘಾಟಿಸಿದರು. ಬಳಿಕ ಮಾತನಾಡಿ ಕನ್ನಡನಾಡು ನುಡಿ ಸಂಸ್ಕೃತಿ, ಸಂಸ್ಕಾರ, ಕನ್ನಡದ ಏಕೀಕರಣ ಅದರ ಸವಾಲುಗಳು, ಕನ್ನಡ ರಾಜ್ಯೋತ್ಸವ ಆಚರಣೆಯ ಮಹತ್ವ ಇತ್ಯಾದಿ ವಿಚಾರವನ್ನು ಹಲವಾರು ಉದಾಹರಣೆಯೊಂದಿಗೆ ಹಾಡಿನೊಂದಿಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಅನಾವರಣಗೊಂಡಿತು. ತದನಂತರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ಬಹುಮಾನವನ್ನು ವಿತರಿಸಲಾಯಿತು. ಶಾಲಾ ಶಿಕ್ಷಕ ವೃಂದ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಪ್ರಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ಶಾಲಾ ವಿಧ್ಯಾರ್ಥಿನಿ ಆರಾಧ್ಯ ಜೈನ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಅತುಲ್ ಭಿಡೆ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here