


ಪಟ್ರಮೆ: ಗ್ರಾಮದ ಪಟ್ಟೂರು ಎಂಬಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ KA-19-MC-5862 ಕಾರಿನಲ್ಲಿ ನ.2ರಂದು 7:30ಕ್ಕೆ ತಡೆದು ನಿಲ್ಲಿಸಿ ಪರಿಶೀಲನೆ ಮಾಡಿದಾಗ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಪತ್ತೆ ಹಚ್ಚಿದ್ದಾರೆ.


ಸ್ವೀಪ್ಟ್ ಕಾರಿನಲ್ಲಿದ್ದ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ನಿವಾಸಿ ಹಮೋದ್ ಕೆ. ಮಗ ಮಹಮ್ಮದ್ ಸಿನಾನ್ (25) ಮತ್ತು ಉಳ್ಳಾಲ ತಾಲೂಕಿನ ಸಜಿಪನಾಡು ಗ್ರಾಮದ ತಂಚಿಬೆಟ್ಟು ನಿವಾಸಿ ತೌಸೀಫ್(38) ಅವರನ್ನು ಬಂಧಿಸಿದ್ದಾರೆ.
ಆರೋಪಿಗಳಿಬ್ಬರು ಮೂರು ದನಗಳನ್ನು ಜೋಹಾರ ಪಟ್ಟೂರು ಗ್ರಾಮದಿಂದ ಖರೀದಿಸಿ ಮಾಂಸ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಮೂರು ಜಾನುವಾರುಗಳ ಮೌಲ್ಯ 20 ಸಾವಿರ ಮತ್ತು ಕಾರಿನ ಮೌಲ್ಯ 2 ಲಕ್ಷ ರೂಪಾಯಿಯಾಗಿದೆ. ಕಾರು ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ 11(1) (D) ಪ್ರಾಣಿ ಹಿಂಸೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಯಿಸಲಾಗಿದೆ.









