


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಿಂದ “ಕಾಯೌ ಶ್ರೀಗೌರಿ” ಶೀರ್ಷಿಕೆಯಡಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ. 3ರಂದು ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಭವ್ಯವಾಗಿ ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಹಾಯಕ ಪ್ರಾಧ್ಯಾಪಕರು (ಕನ್ನಡ ವಿಭಾಗ) ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಶ್ರೀನಾಥ್ ಎಂ.ಪಿ. ಅವರು ಪಾಲ್ಗೊಂಡು, ಕನ್ನಡದ ಮಹತ್ವ ಹಾಗೂ ಸಂಸ್ಕೃತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಮತ್ತು ಯೋಗ ವಿಭಾಗದ ಡೀನ್ ಹಾಗೂ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.









